LATEST NEWS
ಕುಂದಾಪುರ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕುಂದಾಪುರ ಜುಲೈ 05: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಗ್ಗೆ 7ಗಂಟೆ ಸುಮಾರಿಗೆ ನಡೆದಿದೆ.
ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
You must be logged in to post a comment Login