LATEST NEWS
ಕುಂದಾಪುರ – ಲವ್ ಜಿಹಾದ್ ಪ್ರಕರಣ ಆರೋಪಿ ಅಜೀಜ್ ಪೊಲೀಸ್ ವಶಕ್ಕೆ
ಕುಂದಾಪುರ ಮೇ 30 : ಯುವತಿಯೊಬ್ಬಳನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿ ಯುವತಿ ಆತ್ಮಹತ್ಯೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳು. ಈ ನಡುವೆ ಅಜೀಜ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಜೀಜ್ ದೈಹಿಕ ಸಂಪರ್ಕ ಬೆಳೆಸಿದ್ದ. ಅಲ್ಲದೆ ವಿಡಿಯೋ ಮಾಡಿಕೊಂಡು ಯುವತಿಯನ್ನು ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ, ಇದರಿಂದ ನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಈ ಹಿನ್ನಲೆ ಹಿಂದೂಪರ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ಕುಂದಾಪುರದಲ್ಲಿ ನಾಳೆ ಪ್ರತಿಭಟನೆಗೆ ಕರೆ ನೀಡಿದ್ದರು. ಇದೀಗ ಘಟನೆ ನಂತರ ಅಜೀಜ್ ತಲೆಮರೆಸಿಕೊಂಡಿದ್ದ. ಇದೀಗ ಕೊನೆಗೂ ಅಜೀಜ್ ಸಿಕ್ಕಿಬಿದ್ದಿದ್ದಾನೆ. ಆತನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
You must be logged in to post a comment Login