Connect with us

    LATEST NEWS

    ಕುಂದಾಪುರ – ಪತ್ನಿಯನ್ನು ಕಡಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

    ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .


    ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಅವರು ರವಿ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇನ್ನು ಟಿಪ್ಪರ್‌ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು.

    ಆದರೆ ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು. ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದ ಪೂರ್ಣಿಮಾ ಅವರನ್ನು ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು, ರಾತ್ರಿ ಮತ್ತೆ ಕುಡಿದು ಬಂದು ಗಲಾಟೆ ಆಗಿ ಈ ದುರಂತ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply