LATEST NEWS
ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ

ಕುಂದಾಪುರ ಮೇ 22: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆಪಡೆದರೂಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
