LATEST NEWS
ಕುಂದಾಪುರ – ವಿಧ್ಯಾರ್ಥಿನಿಯರಿಗೆ ಅಶ್ಲೀಲ ಮೇಸೆಜ್ ಕಾಲೇಜು ಪಿಆರ್ ಓ ವಿರುದ್ದ ವಿಧ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪುರ ಫೆಬ್ರವರಿ24: ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯೊಬ್ಬರು ಕಾಲೇಜಿನ ವಿಧ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿದ ಆರೋಪದ ಮೇಲೆ ಕುಂದಾಪುರ ಬಿಬಿ ಹೆಗ್ಡೆ ಕಾಲೇಜಿನ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳಿಸುತ್ತಿದ್ದಾರೆಂದು ಆರೋಪಿಸಿದ ವಿಧ್ಯಾರ್ಥಿನಿಯರು ಈ ಕುರಿತಂತೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಶಿಸ್ತು ಕ್ರಮ ಜರುಗಿಸದೆ ಆಡಳಿತ ಸುಮ್ಮನಿದೆ ಎಂದು ಆರೋಪಿಸಿದ್ದಾರೆ.

ಈ ಹಿನ್ನಲೆ ಇಂದು ಕಾಲೇಜಿನ ವಿದ್ಯಾರ್ಥಿಗಳಿಂದ ಕಾಲೇಜು ಮುಂಭಾಗ ಧರಣಿ, ಪಿಆರ್ ಓ ವಿರುದ್ದ ಆಕ್ರೋಶ ಹೊರಹಾಕಿ, ವಜಾಕ್ಕೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ ಕಾಲೇಜು ಪ್ರಾಂಶುಪಾಲ ಉಮೇಶ್, ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದರು, ಆದರೆ ಪಿಆರ್ ಓ ಅನ್ನು ಸ್ಥಳಕ್ಕೆ ಕರೆಸಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು, ಬಿಸಿಲನ್ನೂ ಲೆಕ್ಕಿಸದೇ ಸ್ಥಳದಲ್ಲೇ ಧರಣಿ ಕುಳಿತ ವಿದ್ಯಾರ್ಥಿಗಳು, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದರು.