LATEST NEWS
ಕುಂದಾಪುರ – ಚಲಿಸುತ್ತಿದ್ದ ಪಿಕಪ್ ವಾಹನ ಮೇಲೆ ಬಿದ್ದ ಮರ – ಚಾಲಕನಿಗೆ ಗಂಭೀರ ಗಾಯ

ಕುಂದಾಪುರ ಜುಲೈ 24: ಭಾರೀ ಗಾತ್ಕದ ಮರವೊಂದು ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬಿದ್ದ ಪರಿಣಾಮ ಪಿಕಪ್ ವಾಹನ ಸಂಪೂರ್ಣ ಹಾನಿಗೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾಳವರ ಗ್ರಾಮದ ಕಟ್ಕೇರಿ ಶಾಲೆ ಸಮೀಪ ನಡೆದಿದೆ.
ಗಾಯಗೊಂಡು ಆಸ್ಪತ್ರೆಗೆ ಸೇರಿದ ಚಾಲಕನನ್ನು ಆನಗಳ್ಳಿಯ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಚಾಲಕ ಹರೀಶ್ ತನ್ನ ಪತ್ನಿ ಮನೆಯಾದ ಸಳ್ವಾಡಿಯಿಂದ ಬೆಳಿಗ್ಗೆ ತಮ್ಮ ಪಿಕಪ್ ವಾಹನದಲ್ಲಿ ಮಲ್ಪೆಗೆ ಮೀನು ತರಲೆಂದು ಹೊರಟಿದ್ದರು ಎನ್ನಲಾಗಿದೆ. ಕಾಳಾವರ ಗ್ರಾಮದ ಕಟ್ಕೇರಿ ಎಂಬಲ್ಲಿ ಬರುತ್ತಿದ್ದಂತೆ ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬೃಹತ್ ಮರ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಪಿಕ್ ಅಪ್ ವಾಹನದ ಮೇಲ್ಭಾಗ ನಜ್ಜು ಗುಜ್ಜಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ರಸ್ತೆಗೆ ಬಿದ್ದ ಮರ ತೆರವುಗೊಳಿಸಿದ್ದಾರೆ.
