Connect with us

    DAKSHINA KANNADA

    ಕುಂತೂರು – ಮಕ್ಕಳ ಮೇಲೆಯೇ ಕುಸಿದ ಶಾಲೆಯ ಗೊಡೆ ಮತ್ತು ಮೆಲ್ಟಾವಣಿ

    ಪುತ್ತೂರು ಅಗಸ್ಟ್ 27: ಶಾಲೆಯ ಕಟ್ಟಡದ ಒಂದು ಪಾರ್ಶ್ವದ ಗೊಡೆ ಕುಸಿದು ಬಿದ್ದು ತರಗತಿಯಲ್ಲಿದ್ದ 4 ಮಕ್ಕಳಿಗೆ ಗಾಯಗಳಾದ ಘಟನೆ ಕುಂತೂರು ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ನಡೆದಿದೆ.


    ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ನಲ್ಲಿರುವ ಶಾಲೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಗೊಡೆ ಕುಸಿದು ಬಿದ್ದಿದೆ. ಈ ವೇಳೆ ತರಗತಿಯಲ್ಲಿದ್ದ 5 ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ತರಗತಿಯ ಹೆಚ್ಚಿನ ಮಕ್ಕಳು ಆಟದ ಮೈದಾನದಲ್ಲಿದ್ದ ಕಾರಣ ಭಾರೀ ದೊಡ್ಡ ಅನಾಹುತವೊಂದು ತಪ್ಪಿದೆ.

    ಈ ಹಳೆಯ ಅಪಾಯಕಾರಿ ಕಟ್ಟಡವನ್ನು ತೆರವುಗೊಳಿಸಬೇಕೆಂದು ಗ್ರಾಮಸ್ಥರು ಹಲವು ಭಾರೀ ಪ್ರತಿಭಟನೆ ನಡೆಸಿದ್ದರು. ಆದರೂ ಅಪಾಯಕಾರಿ ಕಟ್ಟಡದಲ್ಲೇ ಮಕ್ಕಳಿಗೆ ತರಗತಿ ನಡೆಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

    ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಎಸ್‌.ಆರ್‌. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ‘ಈ ಶಾಲೆ 74 ವರ್ಷ ಹಳೆಯದು. ಇದರ ಕೊಠಡಿಗಳ ದುರಸ್ತಿಗೆ ಅನುದಾನ ಬಿಡುಗಡೆಯಾಗಿತ್ತು. ಕಟ್ಟಡದ ತಳಪಾಯವನ್ನು ಬಲಪಡಿಸಲು ಜೆಸಿಬಿ ಬಳಸಿ ಕಾಮಗಾರಿ ನಡೆಸಲಾಗುತಿತ್ತು. ಆಗ ಏಕಾಏಕಿ ಗೋಡೆ ಮತ್ತು ಚಾವಣಿ ಕುಸಿದಿದೆ. ನಾಲ್ವರು ಬಾಲಕಿಯರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಕೆ ಚಿಕಿತ್ಸೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

    ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯಿನಿ ರಮ್ಯಶ್ರೀ ಹಾಗೂ ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಕಿರಿಯ ಎಂಜಿನಿಯರ್‌ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಅಮಾನತು ಮಾಡಿದ್ದಾರೆ.

    ‘ಕಾಮಗಾರಿ ಪ್ರಗತಿಯಲ್ಲಿರುವಾಗ ಆ ಸ್ಥಳದಲ್ಲಿ ವಿದ್ಯಾರ್ಥಿಗಳು ಇಲ್ಲದಂತೆ ಮುಖ್ಯೋಪಾಧ್ಯಾಯರು ಕ್ರಮ ವಹಿಸಬೇಕಿತ್ತು. ನಿತ್ಯವೂ ತರಗತಿ ಆರಂಭವಾಗುವ ಮುನ್ನ ಕೊಠಡಿಗಳ ಸುರಕ್ಷತೆಯನ್ನು ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳು ಕೊಠಡಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇವೆ. ಈ ಘಟನೆ ಬಗ್ಗೆ ಸಮಗ್ರವಾದ ತನಿಖೆ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *