Connect with us

    KARNATAKA

    ಕಚೇರಿಯಲ್ಲೇ ತಹಶಿಲ್ದಾರನ ರಾಸಲೀಲೆ – ವಿಡಿಯೋ ವೈರಲ್

    ಕೊಪ್ಪಳ: ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಯೊಂದಿಗೆ ತಹಶಿಲ್ದಾರ್ ಒಬ್ಬರ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರು ಬಸವರಾಜ್ ತಮ್ಮ ಸಹೋದ್ಯೋಗಿಗೆ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


    ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೇ ಮುತ್ತುಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ನಡೆದು ಎರಡು ತಿಂಗಳ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಗುರುಬಸವರಾಜ್ ಅಲ್ಲಿಂದ ವರ್ಗಾವಣೆಯಾಗಿ ಈಗ ಅವರು ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ತಮ್ಮ ಕಚೇರಿಯಲ್ಲಿ ಈ ರೀತಿ ರಾಸಲೀಲೆ ಮಾಡಿ ಹುದ್ದೆಯ ಘನತೆಗೆ ದಕ್ಕೆ ತಂದಿದ್ದಾರೆ ಅಂತ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *