Connect with us

UDUPI

ಕ್ಯಾರ್ ಚಂಡಮಾರುತ ಭೀತಿ ಉಡುಪಿ ಶಾಲಾ ಕಾಲೇಜುಗಳಿಗೆ ಇಂದು (25.10.2019) ರಜೆ

ಕ್ಯಾರ್ ಚಂಡಮಾರುತ ಭೀತಿ ಉಡುಪಿ ಶಾಲಾ ಕಾಲೇಜುಗಳಿಗೆ ಇಂದು (25.10.2019) ರಜೆ

ಉಡುಪಿ ಅಕ್ಟೋಬರ್ 25: ಕರಾವಳಿಯಲ್ಲಿ ಚಂಡಮಾರುತದ ಭೀತಿ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಅಕ್ಟೋಬರ್ 25) ರಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಭೀತಿಯಿಂದ ಈಗಾಗಲೇ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಮೌಖಿಕ ಆದೇಶ ಹೊರಡಿಸಿದ್ದಾರೆ.

ಇನ್ನು ಕಾಸರಗೋಡು ಜಿಲ್ಲೆಯಲ್ಲೂ ಭಾರಿ ಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Facebook Comments

comments