Connect with us

LATEST NEWS

ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ (25.10.2019) ದಕ್ಷಿಣಕನ್ನಡ ಶಾಲಾ ಕಾಲೇಜುಗಳಿಗೆ ರಜೆ

ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ (25.10.2019) ದಕ್ಷಿಣಕನ್ನಡ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು ಅಕ್ಟೋಬರ್ 24: ಕ್ಯಾರ್ ಚಂಡಮಾರುತ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆ ಎಲ್ಲಾ ಶಾಲಾ ಕಾಲೇಜು(ಪಿಯುಸಿ ವರೆಗೆ) ನಾಳೆ (25.10.2019) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪಗಳಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಸನ್ನಿವೇಶ ಉಂಟಾಗಿದ್ದು, ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದೆ. ಈಗಾಗಲೇ ಭಾರತೀಯ ಹವಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿಧ್ಯಾಸಂಸ್ಥೆಗಳಿಗೆ(ಪದವಿಪೂರ್ವ ತರಗತಿಯವರೆಗೆ ) ನಾಳೆ (25.10.2019) ರಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ.

Facebook Comments

comments