LATEST NEWS
ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ – ವಿದ್ಯುತ್ ಪ್ರವಹಿಸಿ ವಿದ್ಯುತ್ ಕಂಬದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನ ಬಲಿ

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ – ವಿದ್ಯುತ್ ಪ್ರವಹಿಸಿ ವಿದ್ಯುತ್ ಕಂಬದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನ ಬಲಿ
ಪುತ್ತೂರು ಎಪ್ರಿಲ್ 11: ವಿದ್ಯುತ್ ಕಂಬದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ಹರಿದ ಪರಿಣಾಮ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ನಡೆದಿದೆ.
ಪುತ್ತೂರು ನಗರದ ಕೆಲವು ಕಡೆಗಳಲ್ಲಿ ಮೆಸ್ಕಾಂ ವಿದ್ಯುತ್ ಲೈನ್ ಗಳ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. ಈ ನಡುವೆ ಬನ್ನೂರಿನಲ್ಲಿರುವ ಮೆಸ್ಕಾಂ ಪ್ರಸರಣ ಕೇಂದ್ರದ ಅಧಿಕಾರಿಗಳು ಏಕಾಏಕಿ ವಿದ್ಯುತ್ ಹರಿಸಿದ ಕಾರಣ ದುರಸ್ತಿ ಕಾಮಗಾರಿಯಲ್ಲಿ ನಿರತನಾಗಿದ್ದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಪಶ್ಚಿಮ ಬಂಗಾಳ ಮೂಲಕ ಮಾಣಿಕ್ಯ್ (24) ಗಾಯಗೊಂಡ ಕಾರ್ಮಿಕನಾಗಿದ್ದಾನೆ. ದುರಸ್ತಿ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಇಂಥಹ ಘಟನೆ ನಡೆದಿರುವುದು ಇದು ಮೂರನೇ ಘಟನೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ವಲಯದಲ್ಲಿ ತೀವೃ ಆಕ್ರೋಶವೂ ವ್ಯಕ್ತವಾಗಿದೆ.