ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರದ ನಯನತಾರಾ 2023ರ ಆಗಸ್ಟ್ 31ಕ್ಕೆ ಇನ್ಸ್ಟಾಗ್ರಾಮ್ಗೆ ಎಂಟ್ರಿ ಕೊಟ್ಟರು. ಅಂದೇ ಮೊದಲ ಬಾರಿಗೆ ತಮ್ಮ ಅವಳಿ ಮಕ್ಕಳ ಮುಖವನ್ನು ವಿಡಿಯೋ ಮೂಲಕ ರಿವೀಲ್ ಮಾಡಿದ್ರು. ಈ ಜನಪ್ರಿಯ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ನಲ್ಲಿ 8.9 ಮಿಲಿಯನ್ ಫಾಲೋವರ್ಸ್ ಸಂಪಾದಿಸಿರುವ ಅವರು ಈವರೆಗೆ 119 ಪೋಸ್ಟ್ಗಳನ್ನು ಶೇರ್ ಮಾಡಿದ್ದಾರೆ.
ನಯನತಾರಾ ಕೊನೆಯದಾಗಿ ‘ಅನ್ನಪೂರ್ಣಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ‘ಮನ್ನಂಗಟ್ಟಿ: ಸಿನ್ಸ್ 1960’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಟಾಕ್ಸಿಕ್ ಅಖಾಡಕ್ಕೆ ದಕ್ಷಿಣ ಚಿತ್ರರಂಗದ ಖ್ಯಾತ ನಟಿ ನಯನತಾರಾ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
You must be logged in to post a comment Login