Connect with us

BELTHANGADI

ನವೆಂಬರ್ 22 ರಿಂದ 27 ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್ 22 ರಿಂದ 27 ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಬೆಳ್ತಂಗಡಿ ನವೆಂಬರ್ 10: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ನಡೆಯುವ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ನವೆಂಬರ್ 22 ರಿಂದ 27 ರವರೆಗೆ ನಡೆಯಲಿದೆ. ನವೆಂಬರ್ 25 ರಂದು 87 ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಸಮ್ಮೇಳನವನ್ನು ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ನವೆಂಬರ್ 26ರಂದು ಅಮೃತ ವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 87ನೇ ಅಧಿವೇಶನವನ್ನು ಡಿಸಿಎಂ ಅಶ್ವತ್ಥನಾರಾಯಣ ಉದ್ಘಾಟಿಸಲಿದ್ದು. ಹಂಪಿ ಕನ್ನಡ ವಿವಿ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಅಧ್ಯಕ್ಷತೆ ವಹಿಸುವರು.

ನವೆಬಂರ್ 22ರಿಂದ 25ರ ವರೆಗೆ ಪ್ರತಿ ದಿನ ಸಂಜೆ 6ರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ನವೆಂಬರ್ 24ರಂದು ಸಂಜೆ 3ರಿಂದ ಅಮೃತವರ್ಷಿಣಿ ಸಭಾ ಭವನದಲ್ಲಿ ಲಲಿತಕಲಾ ಗೋಷ್ಠಿ, ಸಂಜೆ 5.30ರಿಂದ ನೃತ್ಯ, 7ರಿಂದ ಸಂಗೀತ, 8.30ರಿಂದ ನೃತ್ಯ ವೈವಿಧ್ಯ ನಡೆಯಲಿದೆ.

ಲಕ್ಷ ದೀಪೋತ್ಸವ ಪ್ರಯುಕ್ತ ಧರ್ಮಸ್ಥಳದಲ್ಲಿ ನವೆಂಬರ್ 22ರಂದು ಹೊಸಕಟ್ಟೆ ಉತ್ಸವ, 23ರಂದು ಕೆರೆಕಟ್ಟೆ ಉತ್ಸವ, 24ರಂದು ಲಲಿತೋದ್ಯಾನ ಉತ್ಸವ, 25ರಂದು ಕಂಚಿಮಾರುಕಟ್ಟೆ ಉತ್ಸವ, 26ರಂದು ಗೌರಿಮಾರುಕಟ್ಟೆ ಉತ್ಸವ, 27ರಂದು ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ನೆರವೇರಲಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *