Connect with us

BELTHANGADI

ಧರ್ಮಸ್ಥಳ – ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ

ಧರ್ಮಸ್ಥಳ ನವೆಂಬರ್ 26: ಕಾರ್ತಿಕ ಮಾಸದ ಧರ್ಮಸ್ಥಳ ಲಕ್ಷದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ನವೆಂಬರ್ 26 ರಿಂದ 30 ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 26ರಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಮಧ್ಯಾಹ್ನ 3 ಗಂಟೆಗೆ ಸುಮಾರು 25 ಸಾವಿರ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಸಾಗಲಿದ್ದಾರೆ.


ಧರ್ಮಸ್ಥಳದ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದವರೆಗೆ ರಸ್ತೆಯ ಎರಡೂ ಬದಿಯಲ್ಲಿ ಆಕರ್ಷಕ ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ. ಪ್ರೌಢಶಾಲೆ ಆವರಣದಲ್ಲಿ ಸುಮಾರು 300 ಮಳಿಗೆ ಇರುವ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಉಚಿತ ಪ್ರವೇಶ ಇದೆ. ಅಮೃತವರ್ಷಿಣಿ ಸಭಾ ಭವನದಲ್ಲಿ ನ.29ರಂದು ಸಂಜೆ 4ರಿಂದ ಸರ್ವಧರ್ಮ ಸಮ್ಮೇಳನ, ನ.30ರಂದು ಸಂಜೆ 4ರಿಂದ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವ, ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ, ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ. ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ಸೌಲಭ್ಯ ಇದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *