LATEST NEWS
ಕಾವಿ ತ್ಯಜಿಸಿ ಖಾದಿ ಧರಿಸಲು ಸಿದ್ದರಾದ ಶಿರೂರು ಶ್ರೀಗಳು
ಕಾವಿ ತ್ಯಜಿಸಿ ಖಾದಿ ಧರಿಸಲು ಸಿದ್ದರಾದ ಶಿರೂರು ಶ್ರೀಗಳು
ಶಿರೂರು ಶ್ರೀಗಳು ಪಕ್ಷೇತರರಾಗಿ ವಿಧಾನಸಭಾ ಚುನಾವಣೆ ಸ್ಪರ್ಧೆ
ಉಡುಪಿ ಮಾರ್ಚ್ 10: ಉಡುಪಿ ಶ್ರೀಕೃಷ್ಣ ಮಠದ ಅಷ್ಠಮಠಾಧೀಶರಲ್ಲೊಬ್ಬರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ.
ಉಡುಪಿಯ ಅಷ್ಠಮಠಗಳಲ್ಲೊಂದಾದ ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜಿ ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ.
ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮಿಜಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಲಿದ್ದೇನೆ ಎಂದು ಘೋಷಿಸಿದ್ದಾರೆ.
ಒಂದು ವೇಳೆ ಬಿಜೆಪಿಯಿಂದ ಅವಕಾಶ ಸಿಕ್ಕರೆ ಬಿಜೆಪಿ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದೇನೆ ಇಲ್ಲದಿದ್ದಲ್ಲಿ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳು ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ ಈ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಮಠಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂಬ ನಿಯಮಗಳೆನಿಲ್ಲ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ನನ್ನ ರೋಲ್ ಮಾಡೆಲ್ ಇದ್ದ ಹಾಗೆ ಶೀರೂರು ಮೂಲಮಠದಲ್ಲಿ ಶ್ರೀಗಳ ಹೇಳಿಕೆ ನೀಡಿದ್ದಾರೆ.