Connect with us

    DAKSHINA KANNADA

    ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗ ಮತ್ತೆ ದೇವಸ್ಥಾನದ ಸುಪರ್ದಿಗೆ!

    ಪುತ್ತೂರು , ಮಾರ್ಚ್ 21: ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿ-ಮುಂಗಟ್ಟುಗಳನ್ನು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು ಜಾಗವನ್ನು ಮತ್ತೆ ಸುಬ್ರಹ್ಮಣ್ಯ ದೇವಸ್ಥಾನದ ಸುಪರ್ದಿಗೆ ಒಪ್ಪಿಸಲಾಗಿದೆ‌.

    ಪುತ್ತೂರು ನಗರದ ಮಧ್ಯಭಾಗದ ಬೊಳುವಾರು ಎಂಬಲ್ಲಿ ಕುಕ್ಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ 1.57 ಎಕರೆ ಜಮೀನಿದ್ದು, ಈ ಜಮೀನಿನಲ್ಲಿ ಮನೆ ಸೇರಿದಂತೆ ಹಲವು ಅಂಗಡಿಗಳು ಕಾರ್ಯಾಚರಿಸುತ್ತಿದ್ದವು. ಈ ಸಂಬಂಧ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ 2014 ರಂದೇ ಆದೇಶ ನೀಡಿತ್ತು.

    ಆದರೆ ಅಕ್ರಮ ತೆರವು ಕಾರ್ಯಾಚರಣೆ ಈ ವರೆಗೂ ನಡೆಯದ ಕಾರಣ ಹಿಂದೂ ಜಾಗರಣ ವೇದಿಕೆ ಈ ಜಾಗವನ್ನು ದೇವಸ್ಥಾನಕ್ಕೆ ಮರು ಸೇರ್ಪಡೆಗೊಳಿಸಲು ಕಾರ್ಯ ಯೋಜನೆ ಹಾಕಿಕೊಂಡಿತ್ತು.

    ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಅನ್ಯಮತೀಯರು ಗುಜರಿ ವ್ಯಾಪಾರ ನಡೆಸುತ್ತಿರುವುದು ಜಾಗರಣ ವೇದಿಕೆಯ ಅಸಮಾಧಾನಕ್ಕೆ ಕಾರಣವಾಗಿದ್ದ ಹಿನ್ನಲೆಯಲ್ಲಿ ಜಾಗರಣ ವೇದಿಕೆ ನ್ಯಾಯಾಲಯದ ಆದೇಶದ ಮೇರೆಗೆ ಗುಜರಿ ಅಂಗಡಿ ಸೇರಿದಂತೆ ಎಲ್ಲಾ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದೆ. ಅಲ್ಲದೆ ತೆರವುಗೊಳಿಸಿದ ಜಾಗದಲ್ಲಿ ಮಾರ್ಚ್ 24 ರಂದು ಆಶ್ಲೇಷ ಬಲಿ ಪೂಜೆ ಸೇರಿದಂತೆ ಧಾರ್ಮಿಕ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ.

    ದೇವಸ್ಥಾನದ ಜಾಗವನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದಲ್ಲದೆ, ಇದೇ ಜಾಗದ ನಕಲಿ ದಾಖಲೆಗಳನ್ನು ಸೃಷ್ಠಿಸಿ ಅಕ್ರಮ ಎಸೆಯಲಾಗಿತ್ತು ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ. 2014 ರಲ್ಲಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ದೇವಸ್ಥಾನದ ಜಾಗದಲ್ಲಿರುವ ಅತಿಕ್ರಮಣವನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.

    ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ 9 ವರ್ಷಗಳಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸದಿರುವುದು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸುವ ಮೂಲಕ ದೇವಸ್ಥಾನದ ಜಾಗವನ್ನು ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply