KARNATAKA
ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಚಾಲಕರಿಗೆ ಎಚ್ಚರಿಕೆ ವಹಿಸಲು ಸೂಚನೆ..!

ಕಾರ್ಕಳ : ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು ಎಚ್ಚರಿಕೆಯಿಂದ ವಾಹನ ಚಲಾಯಿಸಲು ವಾಹನ ಚಾಲಕರಿ್ಗೆ ಸೂಚಿಸಲಾಗಿದೆ.
ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಘಾಟಿ ರಸ್ತೆ ಕುಸಿದಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರವನ್ನು ಈಗಾಗಲೇ ನಿಷೇಧಿಸಲಾಗಿದೆ. ಭಾನುವಾರ ರಾತ್ರಿ ಘಾಟ್ ರಸ್ತೆಯ ಐದನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಮೇಲೆ ಕಲ್ಲುಮಣ್ಣು ಬಿದ್ದಿದೆ, ಈಗಾಗಲೇ ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದರೂ ಮತ್ತೆ ಕುಸಿಯುವ ಸಾಧ್ಯತೆಗಳಿರುವುದರಿಂದ ಸಂಚಾರದಲ್ಲಕಿ ಜಾಗೃತೆ ವಹಿಸಲು ಸೂಚಿಸಲಾಗಿದೆ.
