Connect with us

    LATEST NEWS

    ಲಂಡನ್ ನಲ್ಲಿ ಕೊಲೆಯಾದ ಹೈದರಾಬಾದ್ ಮೂಲದ ಯುವತಿ…!!

    ಹೈದರಾಬಾದ್/ಲಂಡನ್: ಹೈದರಾಬಾದ್ ಮೂಲದ ವಿಧ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಚಾಕುವಿನಿಂದ ಇರದು ಹತ್ಯೆ ಮಾಡಿದ ಘಟನೆ ಲಂಡನ್ ನಲ್ಲಿ ನಡೆದಿದೆ. ಕೊಲೆಯಾದ ವಿಧ್ಯಾರ್ಥಿನಿಯನ್ನು ಕೊಂತಂ ತೇಜಸ್ವಿನಿ (27) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


    ಮೂರು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದ ಆಕೆ‌ ಎಂ.ಎಸ್ ಪೂರ್ಣಗೊಳಿಸಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹೈದರಾಬಾದ್ ಗೆ ಬಂ‌ದಿದ್ದಳು. ಒಂದು ತಿಂಗಳ ಬಳಿಕ ಲಂಡನ್‌ಗೆ ತೆರಳಿದ್ದಳು. ಈ ವರ್ಷದ ಮೇ ತಿಂಗಳಲ್ಲಿ ವಾಪಸ್ ಬರಬೇಕಿತ್ತು’ ಎಂದು ತೇಜಸ್ವಿನಿ ಅವರ ತಂದೆ ‌ಹೇಳಿದರು. ‘ಲಂಡನ್‌ನಿಂದ ಮರಳಿದ ಬಳಿಕ ಈ ವರ್ಷ ವಿವಾಹ ಆಗುತ್ತೇನೆ ಎಂದಿದ್ದಳು. ತನ್ನ ಕೆಲಸಕ್ಕೂ ರಾಜೀನಾಮೆ ನೀಡಿದ್ದ ಆಕೆ, ಇನ್ನೊಂದು ತಿಂಗಳು ಕೆಲಸ ಮಾಡಿ ಬರುವುದಾಗಿ ಹೇಳಿದ್ದಳು’ ಎಂದು ತಿಳಿಸಿದರು.
    ತೇಜಸ್ವಿನಿ ವಾಸವಿದ್ದ ನೀಲ್ಡ್ ಕ್ರೆಸೆಂಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಯುವತಿ ಸಹ ಇರಿತಕ್ಕೆ ಒಳಗಾಗಿದ್ದು, ಅವರನ್ನು ‌ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  23 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply