LATEST NEWS
ನಿರ್ಮಾಣ ಹಂತದ ಕಟ್ಟಡದ ಮೇಲೆ ಕುಸಿದ ಮಣ್ಣು ಇಬ್ಬರು ಕಾರ್ಮಿಕರ ಸಾವು
ನಿರ್ಮಾಣ ಹಂತದ ಕಟ್ಟಡದ ಮೇಲೆ ಕುಸಿದ ಮಣ್ಣು ಇಬ್ಬರು ಕಾರ್ಮಿಕರ ಸಾವು
ಪುತ್ತೂರು ಎಪ್ರಿಲ್ 24: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮೇಲೆ ಮಣ್ಣು ಕುಸಿತ ಉಂಟಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಅನಿತಾ ಆಯಿಲ್ ಮಿಲ್ ನ ಹೊಸತಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದ ಪರಿಣಾಮ ಈ ಘಟನೆ ನಡೆದಿದೆ.
ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು ಎಂದು ಹೇಳಲಾಗಿದೆ.
ಇದರಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲಾ ಉತ್ತರ ಕರ್ನಾಟಕದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಗ್ನಿ ಶಾಮಕದಳ ರಕ್ಷಣಾ ಕಾರ್ಯ ನಡೆಸುತ್ತಿದೆ.
You must be logged in to post a comment Login