BELTHANGADI
ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿ..ಚಾರ್ಮಾಡಿಯಲ್ಲಿ ಭೂ ಕುಸಿತ
ಬೆಳ್ತಂಗಡಿ ಅಗಸ್ಟ್ 4: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಬಹುತೇಕ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತಗಳಾದ್ದು ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದೆ. ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.
ಕಳೆದ ಆಗಸ್ಟ್‌ನ ಪ್ರಳಯವನ್ನು ನೆನಪಿಸುವಂತೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಭಾರೀ ಮಳೆಗೆ ರಾತ್ರಿಯಲ್ಲಿ ಮರವೊಂದು ಧರಶಾಹಿಯಾಗಿದ್ದು ಅದನ್ನು ತೆರವುಗೊಳಿಸಲಾಗಿದೆ. ಘಾಟಿ ರಸ್ತೆಯಲ್ಲಿ ಪ್ರಸ್ತುತ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧವಿರುವ ಹಿನ್ನೆಲೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.