LATEST NEWS
ಮಣಿಪಾಲ – ಕುಸಿಯುವ ಭೀತಿಯಲ್ಲಿ ಬಹುಮಹಡಿ ಕಟ್ಟಡ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅನಾಹುತ ಸಂಭವಸಿದೆ. ಈ ನಡುವೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಬಹುಮಹಡಿ ಕಟ್ಟಡದ ಸಮೀಪ ಭೂಕುಸಿತ ಉಂಟಾಗಿದ್ದು, ಬಹುಮಹಡಿ ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು, ಅಪಾರ್ಟ್ ಮೆಂಟ್ ನಲ್ಲಿರುವ ಎಲ್ಲಾ ಜನರನ್ನು ಸ್ಥಳಾಂತರಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಸಮೀಪ ಇರುವ ಕಟ್ಟಡ ಇದಾಗಿದ್ದು, ಹೆದ್ದಾರಿ ಕಾಮಗಾರಿ ಸಂದರ್ಭ ನೀರಿನ ಸಹಜ ಹರಿವಿಗೆ ತಡೆಯೊಡ್ಡಿದ ಕಾರಣ ಭೂಕುಸಿತ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ಎ ಸಮೀಪದಲ್ಲಿರುವ 10 ಮಹಡಿಗಳ ಈ ಕಟ್ಟಡದಲ್ಲಿ 32 ಮನೆಗಳಿದ್ದು, 22 ಕುಟುಂಬಗಳು ವಾಸವಾಗಿವೆ.
ಕೆಳ ಮಹಡಿಯಲ್ಲಿ ಫಿಜಾ ಅಂಗಡಿಗಳಿದ್ದು, ಬಂದ್ ಮಾಡಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ಮನೆಗಳಲ್ಲಿ ವಾಸವಾಗಿರುವವರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಒಂದು ಭಾಗದ ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಸ್ಥಳಕ್ಕೆ ಕುಂದಾಪುರ ಎಸಿ ರಾಜು, ಪೌರಾಯುಕ್ತ ಆನಂದ ಕಲ್ಲೋಳಿಕರ್, ಜಿಪಂ ಅಧ್ಯಕ್ಷ ದಿನಕರ ಬಾಬು ಭೇಟಿ ನೀಡಿದ್ದಾರೆ.