Connect with us

    KARNATAKA

    ನಂದಿಬೆಟ್ಟ ಬ್ರಹ್ಮಗಿರಿಯಲ್ಲಿ ಭೂಕುಸಿತ – ಸಂಪರ್ಕ ಕಡಿತ

    ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಮುಖ್ಯರಸ್ತೆ 10 ಅಡಿ ಆಳಕ್ಕೆ ಕುಸಿದಿದ್ದು, ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.


    ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.


    ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆಯಾಗಿದ್ದರಿಂದ, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply