LATEST NEWS
ರಸ್ತೆ ಮೇಲೆ ಕುಸಿದ ಗುಡ್ಡ – ಕೂದಲೆಳೆ ಅಂತರದಲ್ಲಿ ಪಾರಾದ ಬಸ್ ಪ್ರಯಾಣಿಕರು

ಉತ್ತರಾಖಂಡ್ : ಪ್ರಯಾಣಿಕರಿದ್ದ ಬಸ್ ಸಂಚರಿಸುತ್ತಿದ್ದ ರಸ್ತೆಯ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾದ ಘಟನೆ ಉತ್ತರಾಖಂಡ್ ನ ನೈನಿತಾಲ್ ಎಂಬಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 14 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ.
ರಸ್ತೆಯಲ್ಲಿ ಸಾಗುತ್ತಿದ್ದ ಬಸ್ಸಿನ ಮುಂದೆಯೇ ಬೃಹತ್ ಗಾತ್ರದ ಗುಡ್ಡ ಕುಸಿದಿದೆ. ನಂತರ ಕ್ಷಣಾರ್ಧದಲ್ಲಿ ಗುಡ್ಡದ ಮೇಲಿಂದ ಮಣ್ಣು ಕುಸಿಯಲು ಪ್ರಾರಂಭಿಸಿದೆ. ಈ ವೇಳೆ ಪ್ರಾಣ ಉಳಿಸಿಕೊಳ್ಳುವ ಧಾವಂತದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿ-ಬಾಗಿಲಿನ ಮೂಲಕ ಬಸ್ ನಿಂದ ಹೊರ ಹಾರಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ ಅನ್ನು ಹಿಂದಕ್ಕೆ ತೆಗೆದುಕೊಂಡು ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.
