LATEST NEWS
ತಲಪಾಡಿ ಟೋಲ್ ಗೇಟ್ ಬಳಿ ಮುಸ್ಲೀಂ ಲೀಗ್ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಕರ್ನಾಟಕ ಪೊಲೀಸ್

ತಲಪಾಡಿ ಟೋಲ್ ಗೇಟ್ ಬಳಿ ಮುಸ್ಲೀಂ ಲೀಗ್ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಕರ್ನಾಟಕ ಪೊಲೀಸ್
ಮಂಗಳೂರು ಮೇ 25 : ಕರ್ನಾಟಕ ಗಡಿಯಲ್ಲಿ ವಿಜಯೋತ್ಸವ ಆಚರಿಸಲು ಬಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಮುಸ್ಲಿಂ ಲೀಗ್ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಮಂಗಳೂರಿನ ತಲಪಾಡಿ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ. ಕರ್ನಾಟಕ ದ ಗಡಿ ಜಿಲ್ಲೆ ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಗೆಲುವಿನ ಹಿನ್ನೆಲೆಯಲ್ಲಿ ಇಂದು ನಡೆದ ವಿಜಯೋತ್ಸವ ಆಚರಣೆ ಈ ಘಟನೆ ನಡೆದಿದೆ.

ತಲಪಾಡಿ ಟೋಲ್ ಗೇಟ್ ಬಳಿ ಕರ್ನಾಟಕದ ಗಡಿ ಒಳಗೆ ಬರಲು ಯತ್ನಿಸಿದ್ದ ಮುಸ್ಲಿಂ ಲೀಗ್ ಕಾರ್ಯಕರ್ತರ ಗುಂಪನ್ನು ತಡೆಯಲು ಪೊಲೀಸರು ಮುಂದಾದಾಗ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಇದಕ್ಕೂ ಮೊದಲು ನಾಲ್ಕೈದು ಬೈಕ್ ಗಳಲ್ಲಿ ಮುಸ್ಲಿಂ ಲೀಗ್ ಬಾವುಟದೊಂದಿಗೆ ಕರ್ನಾಟಕ ರಾಜ್ಯದ ಗಡಿಯೊಳಕ್ಕೆ ಬಂದ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಾಗ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.
ಸ್ವಲ್ಪ ಸಮಯದ ಬಳಿಕ 50 ಬೈಕ್ ಗಳಲ್ಲಿ ಅಲ್ಲಿಗೆ ಬಂದ ಮುಸ್ಲಿಂ ಲೀಗ್ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಕಲ್ಲು ತೂರಾಟದಲ್ಲಿ ಕೆಲ ಪೊಲೀಸರಿಗೆ ಗಾಯಗಳಾಗಿವೆ. ಕೆಎಸ್‌ಆರ್‌ಟಿಸಿ ಬಸ್ ಕೂಡ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಕಾಸರಗೋಡಿನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.