Connect with us

DAKSHINA KANNADA

ಸಂಪೂರ್ಣ ಹದಗೆಟ್ಟ ಕಾನೂನು ಸುವ್ಯವಸ್ಥೆ – ಬಿ.ಎಸ್ ಯಡಿಯೂರಪ್ಪ

ಮಂಗಳೂರು ಸೆಪ್ಟೆಂಬರ್ 06: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ರಾಜ್ಯದ ಕಾನೂನು ಸುವ್ಯವಸ್ಥೆಯ ನೈಜ ಪರಿಸ್ಥಿತಿ ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ನಿರ್ಭೀತಿಯಿಂದ ಬರೆಯುತ್ತಿದ್ದರು. ಗೌರಿ ಲಂಕೇಶ್ ಅವರ ಸಾವು ಪತ್ರಿಕೋದ್ಯಮದ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ವಿಷಾದ ವ್ಯಕ್ತಪಡಿಸಿದರು. ಗೌರಿ ಲಂಕೇಶ್ ಪ್ರಕರಣದ ಕುರಿತು ಕೂಡಲೇ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ವಿಚಾರವಾದಿ ಎಂ.ಎಂ ಕಲಬುರ್ಗಿ ಅವರ ಹತ್ಯೆ ಪ್ರಕರಣ ದಲ್ಲಿಯೂ ಹಂತಕರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

VIDEO

Facebook Comments

comments