FILM
ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ – ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್
ಬೆಂಗಳೂರು ಜನವರಿ 25: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್ ಜಗದೀಶ್ ಹೊರಗೆ ಬಂದ ಮೇಲೂ ಕೂಡ , ನಟರು ನಟಿಯರ ವಿರುದ್ದ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದರು. ನಿನ್ನೆಯಷ್ಟೇ ಜಗದೀಶ್ ಅವರು ವ್ಯಕ್ತಿಯೊಬ್ಬರ ಜೊತೆ ಜಗಳವಾಗಿತ್ತು. ನಂತರ ವಿಡಿಯೋ ಮಾಡಿದ್ದ ಜಗದೀಶ್, ನಟ ದರ್ಶನ್ ಅಭಿಮಾನಿಗಳ ವಿರುದ್ಧ ಹರಿಹಾಯ್ದಿದ್ದರು. ಇದರ ಬೆನ್ನಲ್ಲೇ ಇಂದು ಜಗದೀಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಜಗದೀಶ್ ಮೂಗು, ತುಟಿಗಳಿಂದ ರಕ್ತ ಹೊರಬರುವಂತೆ ಹಲ್ಲೆ ನಡೆದಿದ್ದು, ರಕ್ತ ಸುರಿಯುತ್ತಿರುವಾಗಲೇ ಪೇಸ್ ಬುಕ್ ಮೂಲಕ ಲೈವ್ ಬಂದು ಜಗದೀಶ್ ಮಾತನಾಡಿದ್ದಾರೆ.
ಪೊಲೀಸ್ ಜೀಪಿನಲ್ಲಿ ಕುಳಿತುಕೊಂಡೇ ಜಗದೀಶ್ ಅವರು ಲೈವ್ ಮಾಡಿದ್ದು ಇವತ್ತು ನನ್ನ ಮತ್ತು ನನ್ನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ. ಪೊಲೀಸರು ಬಂದು ನಮ್ಮನ್ನು ಕಾಪಾಡಿದರು. ನನ್ನ ಸ್ಕಾರ್ಪಿಯೋ ಕಾರನ್ನು ಧ್ವಂಸ ಮಾಡಿದ್ದಾರೆ. ನನ್ನು ಗನ್ ಮ್ಯಾನ್ ಮೇಲೂ ಹಲ್ಲೆ ಮಾಡಿದ್ದಾರೆ. ಜನಪರ ಧ್ವನಿ ಎತ್ತುವರರ ಮೇಲೆ ಹಲ್ಲೆ ಆಗಿದೆ. ಎಲ್ಲಿದೆ ಕಾನೂನು ಸುವ್ಯವಸ್ಥೆ. ಸಿಎಂ ಸಿದ್ದರಾಮಯ್ಯ ಅವರೇ ಏನು ಮಾಡುತ್ತಿದ್ದೀರಿ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಸ್ಥಿತಿ ಏನಾಗಿದೆ. ಇದು ಟೆರರಿಸ್ಟ್ ಗಳ ರಾಜ್ಯವಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಜಗದೀಶ್ ಅವರನ್ನ ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ರನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ