LATEST NEWS
ಅಯೋಧ್ಯೆ ರಾಮಮಂದಿರ ದೇಶದ 140 ಕೋಟಿ ಜನರಿಗೆ ಸೇರಿದ್ದು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ, ಜನವರಿ 17: ಅಯೋಧ್ಯೆ ರಾಮಮಂದಿರ ದೇಶದ 140 ಕೋಟಿ ಜನರಿಗೆ ಸೇರಿದ್ದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ, ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ ದೇಶದ 140 ಕೋಟಿ ಜನರಿಗೆ ಸೇರಿದ್ದ ಎಂದರು.

ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು.