KARNATAKA
ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಉಪನ್ಯಾಸಕಿ ಚಂದನಾ….!!

ಚಾಮರಾಜನಗರ ಅಗಸ್ಟ್ 09: ಉಪನ್ಯಾಸಕಿಯೊಬ್ಬರು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜೆಎಸ್‌ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದನಾ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಳಂದೂರು ತಾಲ್ಲೂಕಿನ ಅಂಬಳೆಯವರಾಗಿದ್ದ ಚಂದನಾ ಅವರ ಹುಟ್ಟುಹಬ್ಬ ಮಂಗಳವಾರವೇ ಇತ್ತು. ಜೆಎಸ್‌ಎಸ್ ಕಾಲೇಜಿನಲ್ಲೇ ಓದಿದ್ದ ಅವರು, ಅಲ್ಲಿಯೇ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ಹಾಸ್ಟೆಲ್‌ನಲ್ಲೇ ಉಳಿದುಕೊಂಡಿದ್ದರು. ಮಂಗಳವಾರ ಬೆಳಿಗ್ಗೆ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾಯುವುದಕ್ಕೂ ಮೊದಲೂ ಪತ್ರ ಬರೆದಿದ್ದಾರೆ. ಅದರಲ್ಲಿ, ‘ನನ್ನ ಸಾವಿಗೆ ನಾನೇ ಕಾರಣ. ಒತ್ತಡದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಬರೆದಿದ್ದಾರೆ.