Connect with us

DAKSHINA KANNADA

ಗ್ರಾಮಸ್ಥರ ಮೇಲೆ ದಾಳಿ ನಡೆಸಿ ಮರವೇರಿ ಕುಳಿತಿದ್ದ ಚಿರತೆ ಸೆರೆ

ಪುತ್ತೂರು : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಗೆ ದಾಳಿ ಮಾಡಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.


ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಶುಕ್ರವಾರ ಬೆಳಗಿನ ಜಾವ ತೋಟಕ್ಕೆ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ದಾಳಿ ನಡೆಸಿ ಮರ ಏರಿ ಕುಳಿತ ಚಿರತೆಯನ್ನು ಹಿಡಿಯಲು ಯಶಸ್ವಿಯಾಗಿದ್ದಾರೆ.


ಪಿಲಿಕುಳದ ನುರಿತ ಶೂಟರ್ ಡಾ.ಯಶಸ್, ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.