BELTHANGADI
ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ

ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ
ಬೆಳ್ತಂಗಡಿ ಜೂನ್ 25: ಆಹಾರವನ್ನು ಅರಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.
ನಾಯಿಯನ್ನು ಅಟ್ಟಾಡಿಸಿಕೊಂಡು ಬಂದ ಚಿರತೆ ಬಾವಿಗೆ ಬಿದ್ದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ನಾವೂರಿನ ಪಡ್ಡೆ ಗಂಗಯ್ಯ ಗೌಡರ ಬಾವಿಯಲ್ಲಿ ಚಿರತೆ ಬಿದ್ದಿದ್ದು, ಮನೆಮಂದಿ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆಯನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
