LATEST NEWS
ಉಡುಪಿ ನಗರಕ್ಕೆ ಚಿರತೆಗಳ ಲಗ್ಗೆ….ಆತಂಕದಲ್ಲಿ ಜನರು….!!

ಉಡುಪಿ ಅಗಸ್ಟ್ 12: ಕಾಡು ನಾಶವಾಗುತ್ತಿರುವ ಬೆನ್ನಲ್ಲೆ ಇದೀಗ ಕಾಡು ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಆಹಾರ ಅರಸಿ ಬರುವ ಚಿರತೆಗಳು ಇತ್ತೀಚಿಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿವೆ.
ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಆಗಿಂದಾಗೆ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರವಾಸಿಗಳಿಗೆ ದೊಡ್ಡ ತಲೆನೋವಾಗಿದೆ. ಇದೀಗ ಮಣಿಪಾಲದ ಪಕ್ಕದಲ್ಲಿರುವ ಪರ್ಕಳದಲ್ಲಿ ಚಿರತೆ ಕಾಣಿಸಿಕೊಂಡಿದೆ. ಹೆರ್ಗ ಗ್ರಾಮದ ಗೋಳಿಕಟ್ಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸ್ಥಳೀಯ ನಿವಾಸಿ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿ ಕುತ್ತಿಗೆಗೆ ಬೆಲ್ಟ್ ಹಾಕಿ ಕಟ್ಟಿದ್ದ ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲೂ ಸೆರೆಯಾಗಿದೆ.

ಈ ಹಿಂದೆಯೂ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು ನಾಟಿಕೋಳಿ, ಸಾಕುನಾಯಿಯನ್ನು ಚಿರತೆಗಳು ಎತ್ತೊಯ್ದಿದ್ದಿದ್ದವು. ಇದೀಗ ಮತ್ತೆ ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸ್ಥಳೀಯ ನಾಗರಿಕರು ಭಯಭೀತರಾಗಿದ್ದಾರೆ.. ಆತಂಕದಲ್ಲಿದ್ದಾರೆ.