Connect with us

DAKSHINA KANNADA

ಚಿರತೆ ಸೆರೆ ಹಿಡಿಯಲು ಸ್ವತಃ ಬಾವಿಗೆ ಇಳಿದ ಪಶು ವೈದ್ಯೆ ಡಾ. ಮೇಘನಾ

ಮಂಗಳೂರು ಫೆಬ್ರವರಿ 13: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆಗೆ ಪಶುವೈದ್ಯಯೊಬ್ಬರ ಸಾಹಸಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯೊಂದು ಬಿದ್ದಿತ್ತು, ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ ರಕ್ಷಣಾ ಕಾರ್ಯ ಪ್ರಾರಂಭಿಸಿದ್ದಾರೆ. ಆದರೆ ಆಳದ ಬಾವಿಯಲ್ಲಿ ಬಿದ್ದಿದ್ದ ಚಿರತೆ ರಕ್ಷಣೆ ಮಾಡುವುದು ಕಷ್ಟಸಾದ್ಯವಾಗಿತ್ತು,


ಬಾವಿಗೆ ಬೋನು ಇಳಿಸಿ ಚಿರತೆಯನ್ನು ಬೋನಿಗೆ ತರಲು ಪ್ರಯತ್ನಿಸಿದರೂ ಅದು ವಿಫಲವಾಗಿತ್ತು, ಕೊನೆಗೆ ಚಿರತೆ ರಕ್ಷಣಾ ಕಾರ್ಯಕ್ಕೆ ವನ್ಯಜೀವಿ ರಕ್ಷಣಾ ಕಾರ್ಯದಲ್ಲಿ ಪಳಗಿರುವ ಪಶುವೈದ್ಯರ ಮೊರೆ ಹೋಗಲಾಗಿತ್ತು. ಪಶುವೈದ್ಯರ ತಂಡವು ಬಾವಿಯಲ್ಲೆ ಚಿರತೆಯ ಸ್ಮೃತಿ ತಪ್ಪಿಸಿ, ಬಳಿಕ ಬೋನಿನ ಮೂಲಕ ಅದನ್ನು ಮೇಲಕ್ಕೆತ್ತುವ ಕಾರ್ಯತಂತ್ರ ರೂಪಿಸಿತು. ಆದರೆ, ಬಾವಿಯು ಸಾಕಷ್ಟು ಆಳ ಇದ್ದುದರಿಂದ ಹಾಗೂ ಬಾವಿಯ ತಳ ಭಾಗದಲ್ಲಿ ಚಿರತೆ ಅಡಗಿ ಕುಳಿತಿದ್ದುದರಿಂದ‌ ಅದಕ್ಕೆ‌ ಅರಿವಳಿಕೆ ಚುಚ್ಚುಮದ್ದು ನೀಡುವುದು ಸುಲಭವಾಗಿರಲಿಲ್ಲ.

ಸಾಕಷ್ಟು ಸಮಾಲೋಚನೆ ಬಳಿಕ , ಪಶುವೈದ್ಯ ರಾದ ಡಾ. ಮೇಘನಾ ಅವರನ್ನು ಬೋನಿನಲ್ಲಿ ಬಾವಿಯೊಳಗೆ ಇಳಿಸಿ, ಅಲ್ಲೇ ಅವರು ಚಿರತೆಗೆ ಅರಿವಳಿಕೆ ಮದ್ದು ನೀಡಲು ನಿರ್ಧರಿಸಲಾಯಿತು. ಅರಿವಳಿಕೆ ಮದ್ದು ಹಾರಿಸುವ ಕೋವಿಯೊಂದಿಗೆ ಬೋನು ಸೇರಿದ ಡಾ.ಮೇಘನಾ ಅವರನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹಗ್ಗಗಳ‌ ನೆರವಿನಿಂದ ಬಾವಿಯೊಳಕ್ಕೆ ನಿಧಾನವಾಗಿ ಇಳಿಸಿದರು.

ಡಾ.ಮೇಘನಾ ಅವರು ಚಿರತೆಯ ಸಮೀಪಕ್ಕೆ ಸಾಗಿ ಅದರತ್ತ ಅರಿವಳಿಕೆ ಚುಚ್ಚುಮದ್ದು ಹಾರಿಸಿದರು. ಚಿರತೆ ಸಂಪೂರ್ಣ ಸ್ಮೃತಿ ತಪ್ಪಿರುವುದನ್ನು ಖಾತರಿಪಡಿಸಿಕೊಂಡ ಬಳಿಕ ಅದನ್ನು ಬೋನಿನೊಳಕ್ಕೆ ಹಾಕಿದರು. ಚಿರತೆ ಹಾಗೂ ಡಾ.ಮೇಘನಾ ಅವರಿದ್ದ ಬೋನನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮೇಲಕ್ಕೆತ್ತಿದರು. ರಕ್ಷಣೆ ಮಾಡಿದ ಚಿರತೆಯು ಸುಮಾರು ಒಂದು ವರ್ಷ ಪ್ರಾಯದ್ದು. ಅದನ್ನು ಸುರಕ್ಷಿತ ವಾಗಿ ಮತ್ತೆ ಕಾಡಿಗೆ ಬಿಡಲಾಗಿದೆ. ಪಶುವೈದ್ಯ ರಾದ ಡಾ.ಪೃಥ್ವಿ ಹಾಗೂ ಡಾ.ನಫೀಸಾ ಅವರು ಈ ಕಾರ್ಯಾಚರಣೆಗೆ ನೆರವಾದರು. ಬಾವಿಗೆ ಬಿದ್ದ ಚಿರತೆಯನ್ನು ನೋಡಲು ನೂರಾರು ಸ್ಥಳದಲ್ಲಿ ಸೇರಿದ್ದರು.

 

Advertisement
Click to comment

You must be logged in to post a comment Login

Leave a Reply