LATEST NEWS
ನಾವು ದೇವರಾಗುತ್ತೇವೋ ಇಲ್ಲವೋ ಎನ್ನುವುದನ್ನು ಜನ ನಿರ್ಧರಿಸಲಿ- ಮಣಿಪುರದ ಸ್ಥಿತಿ ಕಷ್ಟಕರವಾಗಿದೆ – RSS ಮುಖ್ಯಸ್ಥ ಮೋಹನ್ ಭಾಗವತ್
ಪುಣೆ ಸೆಪ್ಟೆಂಬರ್ 06: ನಮ್ಮನ್ನು ಕೆಲವರು ದೇವರಾಗಿದ್ದೇವೆ ಎಂದು ಸ್ವಯಂ ಘೋಷಿಸಬಾರದು , ನಾವು ದೇವರಾಗುತ್ತೇವೋ ಇಲ್ಲವೋ ಎಂಬುದನ್ನು ಜನರು ನಿರ್ಧರಿಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಮಣಿಪುರದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಮತ್ತು ಭಯ್ಯಾಜಿ ಎಂದು ಜನಪ್ರಿಯರಾಗಿದ್ದ ಶಂಕರ್ ದಿನಕರ್ ಕೇನ್ ಅವರ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಕೆಲವರು ಭಾವಿಸುತ್ತಾರೆ. ಆದರೆ ಸಿಡಿಲು ಬಡಿದ ನಂತರ ಮೊದಲಿಗಿಂತ ಹೆಚ್ಚು ಕತ್ತಲೆಯಾಗುತ್ತದೆ. ಆದ್ದರಿಂದ ಕೆಲಸಗಾರರು ದೀಪಗಳಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಮಾತ್ರ ಹೊಳೆಯಬೇಕು ಎಂದು ಹೇಳಿದರು.
ಮಣಿಪುರದಲ್ಲಿ ಪರಿಸ್ಥಿತಿ ಕಷ್ಟಕರವಾಗಿದೆ. ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ವ್ಯಾಪಾರ ಅಥವಾ ಸಾಮಾಜಿಕ ಕೆಲಸಕ್ಕಾಗಿ ಅಲ್ಲಿಗೆ ಹೋದವರಿಗೆ ಪರಿಸ್ಥಿತಿ ಇನ್ನಷ್ಟು ಸವಾಲಿನದ್ದಾಗಿದೆ. ಇಂತಹ ಕಠಿಣ ಪರಿಸ್ಥಿತಿಗಳಲ್ಲಿಯೂ ಸಂಘದ ಸ್ವಯಂಸೇವಕರು ದೃಢವಾಗಿ ನಿಂತು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೋಹನ್ ಭಾಗವತ್ ಆರ್‌ಎಸ್‌ಎಸ್ ಕಾರ್ಯಕರ್ತರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
You must be logged in to post a comment Login