BANTWAL
ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಕ್ರಮಕ್ಕೆ ಅಮಿತ್ ಶಾ ಗೆ ಪತ್ರ

ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಕ್ರಮಕ್ಕೆ ಅಮಿತ್ ಶಾ ಗೆ ಪತ್ರ
ಬಂಟ್ವಾಳ ಜನವರಿ17: ದಕ್ಷಿಣಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಿಎಎ ಕಾಯ್ದೆ ವಿರುದ್ದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿಸಿ ಕೇಂದ್ರ ಗೃಹಸಚಿವರಿಗೆ ಪತ್ರ ಬರೆಯಲಾಗಿದೆ.
ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ್ ಪ್ರಭು ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಸಿಎಎ ಕಾಯ್ದೆ ವಿರುದ್ದ ಗೊಂದಲ ಸೃಷ್ಟಿಸುತ್ತಿದ್ದಾರೆ. ಎನ್.ಪಿ.ಆರ್ ಗಣತಿಗೆ ಬರುವ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ಸಲಹೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
