Connect with us

    LATEST NEWS

    ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

    ನವದೆಹಲಿ, ಏಪ್ರಿಲ್ 19: ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಆ ಮೂಲಕ ದೇಶದ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಇಂಜಿನಿಯರ್ ಎಂಬ ಖ್ಯಾತಿ ಗಳಿಸಿದ್ದಾರೆ.

    ಏಪ್ರಿಲ್ ತಿಂಗಳಾಂತ್ಯದ ವೇಳೆಗೆ ನಿವೃತ್ತಿ ಹೊಂದಲಿರುವ ಭಾರತೀಯ ಸೇನಾ ಜನರಲ್ ಎಂ ಎಂ ನರವಾನೆ ಅವರಿಂದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆಯವರು ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. 29ನೇ ಸೇನಾ ಮುಖ್ಯಸ್ಥರು ತಮ್ಮ 28 ತಿಂಗಳ ಅಧಿಕಾರಾವಧಿಯನ್ನು ಏಪ್ರಿಲ್ 30 ರಂದು ಪೂರ್ಣಗೊಳಿಸಲಿರುವ ಜನರಲ್ ಮನೋಜ್ ಮುಕುಂದ್ ನರವಾಣೆ ನಂತರ ಸೇನಾ ಸಿಬ್ಬಂದಿಯ ಮುಖ್ಯಸ್ಥರಾಗಲು ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನ ಮೊದಲ ಅಧಿಕಾರಿಯಾಗಲಿದ್ದಾರೆ.

    ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸೋಮವಾರ ಪ್ರಕಟಿಸಿದೆ.

    ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ, ಪಾಂಡೆ ಅವರನ್ನು ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ ನಿಯೋಜಿಸಲಾಗಿತ್ತು. ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಲ್ಲನ್‌ವಾಲಾ ಸೆಕ್ಟರ್‌ನಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಇಂಜಿನಿಯರ್ ರೆಜಿಮೆಂಟ್‌ಗೆ ಮುಂದಾಳತ್ವ ವಹಿಸಿದ್ದರು. 2001ರ ಸಂಸತ್ ದಾಳಿ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ಸನ್ನಿವೇಶ ಸೃಷ್ಟಿಯಾಗಿತ್ತು. ಅಂದು ಪಶ್ಚಿಮ ಗಡಿಗೆ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಸಜ್ಜುಗೊಳಿಸುವುದೇ ಪರಾಕ್ರಮ್ ಕಾರ್ಯಾಚರಣೆ ಆಗಿತ್ತು.

    ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆಯವರ 39 ವರ್ಷಗಳ ಸೇನಾ ವೃತ್ತಿಜೀವನದಲ್ಲಿ ಪಶ್ಚಿಮ ಭಾಗದ ಇಂಜಿನಿಯರ್ ಬ್ರಿಗೇಡ್, ಎಲ್‌ಒಸಿ ಉದ್ದಕ್ಕೂ ಪದಾತಿ ದಳ, ಲಡಾಖ್ ಸೆಕ್ಟರ್‌ನಲ್ಲಿ ಪರ್ವತ ವಿಭಾಗ ಮತ್ತು ಈಶಾನ್ಯದಲ್ಲಿ ಕಾರ್ಪ್ಸ್‌ಗೆ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ಪೂರ್ವ ವಿಭಾಗದ ಕಮಾಂಡ್‌ನ ಅಧಿಕಾರ ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *