DAKSHINA KANNADA
ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ..!

ಬೆಂಗಳೂರು : ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ನಾಡಿನಲ್ಲಿ ಸುಡು ಬಿಸಿಲ ಬೇಗೆ ಜಾಸ್ತಿಯಾಗಿದ್ದು ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಕರ್ನಾಟಕದ ಕೊಡಗು, ಬೀದರ್ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊಂಚ ಮಳೆ ಆರಂಭವಾಗಿದ್ದು ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಈಗಾಗಲೇ ಮಳೆ ಸುರಿಯಲಾರಂಭಿಸಿದೆ. ರಾಜ್ಯದಲ್ಲೂ ಮುಂದಿನ ದಿನಗಳಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆ ಬರುವ ಸೂಚನೆ ದೊರೆತಿದೆ. ಬೆಂಗಳೂರು ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಉಳಿದ ಭಾಗಗಳಲ್ಲಿ ಮಾರ್ಚ್ 20 ರ ಬುಧವಾರದಿಂದ ಮಳೆ ಬರುವ ಮುನ್ಸೂಚನೆ ಇದೆ. ಜೊತೆಗೆ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳು ಸೇರಿದಂತೆ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
