LATEST NEWS
ವಾಯುಭಾರ ಕುಸಿತ ನಾಳೆಯಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ
ವಾಯುಭಾರ ಕುಸಿತ ನಾಳೆಯಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು ಮಾರ್ಚ್ 13: ಶ್ರೀಲಂಕಾ ದಕ್ಷಿಣ ಕರಾವಳಿ ಮತ್ತು ಮಾಲ್ಡೀವ್ಸ್ ಪ್ರದೇಶದಲ್ಲಿ ವಾಯುಭಾರ ಕುಸಿತದ ವಾತಾವರಣ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
ವಾಯುಭಾರತ ಕುಸಿತದಿಂದ ಉಂಟಾಗುವ ಚಂಡಮಾರುತದಿಂದ ಶ್ರೀಲಂಕಾ, ತಮಿಳುನಾಡು, ಕೇರಳ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು , ಹಾಸನ, ಕೊಡಗು, ಶಿಮಮೊಗ್ಗದಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.
ಚಂಡಮಾರುತ ನಿರ್ಮಾಣವಾದರೆ ಅದು ಅರಬ್ಬಿ ಸಮುದ್ರದಲ್ಲಿ ವಾಯುವ್ಯ ದಿಕ್ಕಿನತ್ತ ಸಂಚರಿಸಲಿದ್ದು,
ಕರಾವಳಿ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಕೆಲ ಪ್ರದೇಶದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮೀನುಗಾರಿಕೆ ಬಂದ್
ಕೇರಳದ ಕರಾವಳಿ ತೀರದ ಸಮುದ್ರದಲ್ಲಿ ಬೃಹತ್ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಬಗ್ಗೆ ಜಿಲ್ಲಾಡಳಿತ ಏಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿವೆ.
ಅಲ್ಲದೇ ಕೇರಳ ಭಾಗಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟುಗಳು ತರಾತುರಿಯಲ್ಲಿ ಬಂದರಿಗೆ ಆಗಮಿಸಿವೆ.
ಮುಂದಿನ ಸೂಚನೆಯವರೆಗೆ ಯಾವುದೇ ಬೋಟುಗಳು ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.