DAKSHINA KANNADA
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಸರಣಿ ವಿದ್ಯುತ್ ಅಪಘಾತ, ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಸಾವು
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಸರಣಿ ವಿದ್ಯುತ್ ಅಪಘಾತ, ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಸಾವು
ಪುತ್ತೂರು ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಅಪಘಾತದಲ್ಲಿ ನಿನ್ನೆಯಿಂಗ 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೆಸ್ಕಾಂ ನ ನಿರ್ಲಕ್ಷ್ಯತನಕ್ಕೆ ಇಂದು ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಅಪಘಾತಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಪತ್ತೂರಿನ ಉಪ್ಪಿನಂಗಡಿಯ ಬೇರಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮೃತ ಲೈನ್ ಮ್ಯಾನ್ ನನ್ನು 32 ವರ್ಷದ ಮೀಟ್ಯಾ ನಾಯಕ್ ಎಂದು ಗುರುತಿಸಲಾಗಿದೆ.
ಮೀಟ್ಯಾ ನಾಯಕ್ ಮೂಲತ ದಾವಣಗೆರೆಯ ಹರಿಹರ ಮೂಲದವರಾಗಿದ್ದಾರೆ. ಕಳೆದ 5 ವರ್ಷಗಳಿಂದ ಸವಣೂರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೀಟ್ಯಾ ವಿದ್ಯುತ್ ಸ್ಪಾರ್ಕ್ ಬಂದ ದೂರಿನ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಕರ್ತವ್ಯದಲ್ಲಿದ್ದ ಸಂದರ್ಭ ವಿದ್ಯುತ್ ಶಾಕಿಗೆ ಬಲಿಯಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿದ್ದಾರೆ.
ನಿನ್ನೆಯಷ್ಟೇ ಬಂಟ್ವಾಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಂದೆ ಮಗಳು ಸಾವನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಸಾವು ಸಂಭವಿಸಿದ್ದು, ಮೆಸ್ಕಾಂನ ನಿರ್ಲಕ್ಷ್ಯತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.