KARNATAKA
ಬೆಂಗಳೂರಿನಲ್ಲಿ 2 ದಿನ ಮದ್ಯ ಮಾರಾಟ ನಿಷೇಧ
ಬೆಂಗಳೂರು, ಸೆಪ್ಟೆಂಬರ್ 03: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.