Connect with us

    LATEST NEWS

    ಮಂದಾರ್ತಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

    ಉಡುಪಿ, ಫೆಬ್ರವರಿ 13 : ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 15 ರ ವರೆಗೆ ನಡೆಯಲಿದೆ. ಈ ಹಿನ್ನಲೆ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿ  ಮದ್ಯಮಾರಾಟಕ್ಕೆ ನಿಷೇಧ ಹೇರಲಾಗಿದೆ.

    ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 15 ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಫೆ. 13 ರ ಸಂಜೆ 6 ರಿಂದ ಫೆ. 15 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    Share Information
    Advertisement
    Click to comment

    You must be logged in to post a comment Login

    Leave a Reply