Connect with us

    LATEST NEWS

    ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 2 ದಿನ ಮದ್ಯದಂಗಡಿ ಬಂದ್

    ಮಂಗಳೂರು ಸೆಪ್ಟೆಂಬರ್ 16: ಬೂದಿ ಮುಚ್ಚಿದ ಕೆಂಡದಂತಿರುವ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂದಿನ 48 ಗಂಟೆಗಳ ಕಾಲ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.


    ಕಾಂಗ್ರೇಸ್ ಮುಖಂಡರೊಬ್ಬರ ಹೇಳಿಕೆ ಖಂಡಿಸಿ ಇಂದು ಹಿಂದೂ ಕಾರ್ಯಕರ್ತರು ಬಿಸಿರೋಡ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಸವಾಲು ಪ್ರತಿ ಸವಾಲು ಗಲಾಟೆಗೆ ಬಿಸಿ ರೋಡ್ ನಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಪೊಲೀಸರ ಮಧ್ಯಪ್ರವೇಶದಿಂದ ಸದ್ಯ ಸ್ಥಿತಿ ಶಾಂತಿವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯತೆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಕೋರಿಕೆ ಮೇರೆಗೆ ಈ ಆದೇಶ ಮಾಡಲಾಗಿದೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *