DAKSHINA KANNADA
ನಾಳೆ ಮಧ್ಯರಾತ್ರಿವರೆಗೆ ದ.ಕ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧ
ಮಂಗಳೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ.
ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಸುಳ್ಯ, ಬಂಟ್ವಾಳ, ಪುತ್ತುರು, ಕಡಬದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.