DAKSHINA KANNADA
ಕುಕ್ಕೆ ಚಂಪಾ ಷಷ್ಠಿ, ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಕುಕ್ಕೆ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ. ಕ. ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳೂರು : ಕುಕ್ಕೆ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ. ಕ. ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಡಿಸೆಂಬರ್ 6ರಂದು ಪಂಚಮಿ ರಥೋತ್ಸವ ಹಾಗೂ ಡಿಸೆಂಬರ್ 7ರಂದು ಚಂಪಾಷಷ್ಠಿ ಮಹಾರತೋತ್ಸವವು ನಡೆಯಲಿದೆ.
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿ ಬಳಿ ಇರುವ ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಡಿಸೆಂಬರ್ 6 ರ ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 7ರ ಮಧ್ಯರಾತ್ರಿ 12 ಗಂಟೆಯ ವರೆಗೆ ಬಂದ್ ಇರಿಸುವಂತೆ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಹೊರಡಿಸಿದ್ದಾರೆ.