LATEST NEWS
ದಕ್ಷಿಣಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ
ಮಂಗಳೂರು ಸೆಪ್ಟೆಂಬರ್ 19: ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
You must be logged in to post a comment Login