UDUPI
ಉಡುಪಿ ಲಾಕ್ ಡೌನ್ ಬಗ್ಗೆ ನಾಳೆ ನಿರ್ಧಾರ – ಜಿಲ್ಲಾಧಿಕಾರಿ

ಉಡುಪಿ ಜುಲೈ 13: ದಕ್ಷಿಣಕನ್ನಡ ಜಿಲ್ಲೆಯ ಲಾಕ್ ಡೌನ್ ನ ಘೋಷಣೆಯಾದ ಬಳಿಕ ಈಗ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದ ಬಳಿಕ ಮಾತನಾಡಿದ, ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ನಿರ್ಧಾರ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಒಂದು ವೇಳೆ ಲಾಕ್ ಡೌನ್ ಮಾಡುವುದಿದ್ದರೂ ಕೂಡಾ ಜನರಿಗೆ ಮುಂಚಿತವಾಗಿ ಮಾಹಿತಿ ನೀಡುತ್ತೇವೆ. ಸಂಚಾರ ನಡೆಸಲು ಇಚ್ಚಿಸುವವರಿಗೆ ಎರಡು ದಿನದ ಅವಕಾಶ ನೀಡಲಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಗಾಬರಿಯಾಗುವುದು ಬೇಡ ಎಂದು ಹೇಳಿದ್ದಾರೆ.
ಲಾಕ್ ಡೌನ್ ಅಲ್ಲದಿದ್ದರೆ ಜಿಲ್ಲೆಯ ಗಡಿಗಳ ಸೀಲ್ ಡೌನ್ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಅಂತಿಮ ನಿರ್ಧಾರವನ್ನು ನಾಳೆ ನಡೆಯಲಿರುವ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
