Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೂನ್ 14ರ ಬಳಿಕ ಇನ್ನೂ ಒಂದು ವಾರ ಲಾಕ್ ಡೌನ್ ಸಾಧ್ಯತೆ..!!

ಮಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಜೂನ್ 14 ರ ನಂತರವೂ ಮತ್ತೆ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇಂದು ಸಂಜೆ ಈ ಕುರಿತಂತೆ ಮಾಹಿತಿ ಹೊರಬೀಳಲಿದೆ.


ಮುಖ್ಯಮಂತ್ರಿ ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚೆ ನಡೆಸಿದರು.

ಈ ಸಂದರ್ಭ ಈ ಎಂಟು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತೆ ನಿರ್ಬಂಧಗಳನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ಈ ಹಿನ್ನಲೆ ಕೊರೊನಾ ಸೊಂಕು ಹೆಚ್ಚಿರುವ ಜಿಲ್ಲೆಗಳು ಮತ್ತೆ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *