Connect with us

LATEST NEWS

ಜೂನ್ 14 ರ ಬಳಿಕ ಮತ್ತೆ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಜೂನ್ 11: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಸಭೆ ನಡೆದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೂನ್ 14ರ ಬಳಿಕ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಸಿಎಂ ಜೊತೆ ವಿಡಿಯೋ ಕಾನ್ಪರೆನ್ಸ್ ಬಳಿಕ ಮಾತನಾಡಿದ ಅವರು ಕೊರೊನಾ ಸೊಂಕು ಹೆಚ್ಚಿರುವ ಹಿನ್ನಲೆ ಜಿಲ್ಲೆಯಲ್ಲಿ ಕೆಲವು ಕೈಗಾರಿಕೆಗಳನ್ನು ಹೊರತುಪಡಿಸಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಜೂ.14ರ ಬಳಿಕ ಬಹುತೇಕ ಮತ್ತೆ ಒಂದು ವಾರಗಳ ಲಾಕ್ ಡೌನ್ ಮುಂದುವರಿಸಲಾಗುವುದು ಎಂದವರು ಹೇಳಿದರು.


ಜೂನ್ 14 ರ ಬಳಿಕದ ಲಾಕ್ ಡೌನ್ ಸಂದರ್ಭ ಯಾರಿಗೆಲ್ಲಾ ರಿಯಾಯಿತಿ ನೀಡಬಹುದು ಎಂಬುದರ ಕುರಿತಂತೆ ಜೂನ್ 11ರಂದು ಸಂಸದರು, ಶಾಸಕರ ಸಭೆ ಮಾಡಲಾಗುವುದು. ಸಭೆಯಲ್ಲಿ ಕೂಲಿ ಕಾರ್ಮಿಕರಿಗೆ ಮತ್ತು ಕೈಗಾರಿಕಾ ಕಾರ್ಮಿಕರಿಗೆ‌ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಸಡಿಲಿಕೆ ಮಾಡುವ ಬಗ್ಗೆ ಚರ್ಚಿಸಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ.