LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 3 ರ ವರೆಗೆ ಯಥಾಸ್ಥಿತಿ ಲಾಕ್ ಡೌನ್ ಮುಂದುವರಿಕೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 3 ರ ವರೆಗೆ ಯಥಾಸ್ಥಿತಿ ಲಾಕ್ ಡೌನ್ ಮುಂದುವರಿಕೆ
ಮಂಗಳೂರು ಎಪ್ರಿಲ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 3 ರವರೆಗೆ ಯಥಾಸ್ಥಿತಿಯಲ್ಲಿ ಲಾಕ್ ಡೌನ್ ಮುಂದುವರೆಸಲು ಇಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯಸರಾಕರ ಈಗಾಗಲೇ ಲಾಕ್ ಡೌನ್ ಸಡಿಲಿಕೆ ಘೋಷಿಸಿದ್ದರೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಎರಡು ಸಾವು ಸಂಭವಿಸಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡದೇ ಇರಲು ನಿರ್ಧರಿಸಲಾಗಿದೆ.

ಎಂದಿನಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗ ಅಗತ್ಯ ವಸ್ತುಗಳ ಅಂಗಡಿಗಳು ತೆರೆಯಲಿವೆ. ಎಂದಿನಂತೆ ನಿರ್ಬಂಧಗಳು ಮುಂದುವರೆಯಲಿದೆ.