ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು ಮೇ.17: ಸದ್ಯ ಇರುವ ಲಾಕ್ ಡೌನ್ 3.0 ನ್ನು ಇನ್ನೆರಡು ದಿನಗಳ ಕಾಲ ಮುಂದುವರೆಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.

ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ತಿಳಿಸಿದ್ದಾರೆ.