Connect with us

    FILM

    ಬಿಗ್ ಬಾಸ್ ಗೆ ತಟ್ಟಿದ ಕೊರೊನಾ ಲಾಕ್‍ಡೌನ್ ಎಫೆಕ್ಟ್…ಬಿಗ್ ಬಾಸ್ ನಾಳೆಗೆ ಕ್ಲೋಸ್!

    ಬೆಂಗಳೂರು, ಮೇ 08 : ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಇತ್ತೀಚಿಗೆ ವಾರಾಂತ್ಯದ ಶೋ ನಡೆಸಲು ಕಿಚ್ಚ ಸುದೀಪ್ ಕೂಡ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮ ನಡೆಸಿ ಕೊಡಲು ಬಂದಿರಲಿಲ್ಲ. ಇದೀಗ ಬಿಗ್ ಬಾಸ್ ಅಧಿಕೃತವಾಗಿ ತನ್ನ 8 ನೇ ಆವೃತ್ತಿಯನ್ನು ರದ್ದುಗೊಳಿಸುತ್ತಿರುವ ಬಗ್ಗೆ ಸುದ್ದಿ ಹೊರ ಬಂದಿದೆ.

    ಬಿಗ್ ಬಾಸ್ ಮನೆಯೊಳಗಡೆ ಇರುವ ಮಂದಿಗೆ ಸದ್ಯ ಕೋವಿಡ್ ವಿಷಯದಲ್ಲೊ ಹೊರಗೆ ನಡೆಯುತ್ತಿರುವ ಸಂಕಷ್ಟ, ಸಂಕಟಗಳು ತಿಳಿಯುತ್ತಿಲ್ಲ. ಹೊರಗಿನ ಪರಿಸ್ಥಿತಿಯನ್ನು ನೋಡುತ್ತಿದ್ದರೆ ನಿಜಕ್ಕೂ ಮನಸ್ಸಿಗೆ ತುಂಬಾ ಬೇಜಾರ್ ಆಗುತ್ತದೆ. ಸ್ಪರ್ಧಿಗಳೀಗ ಐಸೋಲೇಷನ್ ನಲ್ಲಿ ಇರುವುದರಿಂದ ಸುರಕ್ಷಿತವಾಗಿದ್ದಾರೆ. ಅವರನ್ನು ನಾಳೆ ಮನೆಯ ಹೊರಗೆ ಕರೆದು ಸುರಕ್ಷಿತವಾಗಿ ಅವರವರ ಮನೆಗೆ ಕಳುಹಿಸಿ ಕೊಡುತ್ತೇವೆ ಎಂದು ಕಾರ್ಯಕ್ರಮ ಪ್ರಸಾರವಾಗುತ್ತಿರುವ ವಾಹಿನಿಯ ಬ್ಯುಸಿ ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply